ಕೊಪ್ಪಳ : ಮನೆಯಲ್ಲಿ ಅಡುಗೆ ಸಿಲಿಂಡರ್ ಸ್ಪೋಟಗೊಂಡು ಘೋರ ದುರಂತವೊಂದು ಸಂಭವಿಸಿದ್ದು, 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡಿದ್ದು, ಮನೆಯಲ್ಲಿದ್ದ 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮನೆಯಲ್ಲಿದ್ದ ರಾಜು, ದುರ್ಗಪ್ಪ, ಸುರೇಶ್, ಹುಸೇನಮ್ಮ, ನಾಗರಾಜ್, ವಿಷ್ಣು, ಹುಲಿಗೆಮ್ಮ, ಶ್ರೀಕಾಂತ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು, ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.








