ಶಿವಮೊಗ್ಗ : ಕೃಷಿ ಚಟುವಟಿಕೆಗೆ ಹೋಗಿದ್ದಾಗ ಕೃಷಿಹೊಂಡದಲ್ಲಿ ಮುಳುಗಿ ಇಬ್ಬರು ದಾರುಣವಾಗಿ ಸಾವನಪ್ಪಿರುವ ಘಟನೆ ಶಿವಮೊಗ್ಗ ತಾಲೂಕಿನ ಚೆನ್ನಹಳ್ಳಿಯಲ್ಲಿ ಗ್ರಾಮದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ.

ಹೌದು ಕೃಷಿಹೊಂಡದಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ತಾಲೂಕಿನ ಚೆನ್ನಹಳ್ಳಿಯಲ್ಲಿ ಸಂಭವಿಸಿದೆ.ಕೃಷಿ ಚಟುವಟಿಕೆಗೆ ಹೋಗಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಅಭಯ್ (16) ಹಾಗೂ ಮಾಲತೇಶ್ (27) ಮೃತ ದುರ್ದೈವಿಯಾಗಿದ್ದಾರೆ.

ಕೃಷಿ ಚಟುವಟಿಕೆಗೆ ಎಂದು ತೆರಳಿದ್ದಾಗ ಈ ವೇಳೆ ಅಭಯ್ ಕಾಲುಜಾರಿ ಕೃಷಿ ಹೊಂಡಕ್ಕೆ ಬಿದ್ದಿದ್ದಾನೆ. ಇದನ್ನು ನೋಡಿದ ಮಾಲತೇಶ್ ಅಭಯ್ ನನ್ನು ರಕ್ಷಿಸಲು ಹೋಗಿ ತಾನು ಸಹ ಮುಳುಗಿ ಸಾವನ್ನಪ್ಪಿದ್ದಾನೆ. ಕೃಷಿ ಹೊಂಡದಿಂದ ಇಬ್ಬರ ಶವವನ್ನು ಜನರು ಹೊರ ತೆಗೆದಿದ್ದಾರೆ.

ತಕ್ಷಣ ಮೃತ ದೇಹಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ವೇಳೆ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಘಟನೆ ಕುರಿತಂತೆ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share.
Exit mobile version