ತುಮಕೂರು : ತುಮಕೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ತುಮಕೂರಿನ ಯಲ್ಲಾಪುರ ಬಳಿ ಹುಟ್ಟುಹಬ್ಬದ ಪಾರ್ಟಿ ಮುಗಿಸಿಕೊಂಡು ಹೋಗುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತಪಟ್ಟವರನ್ನು ಉಮಾ (50) ಹಾಗೂ ವಿನೋದ್ (24) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ತುಮಕೂರು ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.