ಬೆಂಗಳೂರು : ಸಂಕ್ರಾಂತಿ ಹಬ್ಬದ ದಿನವೇ ರಾಜ್ಯದಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಕೆರೆಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕನಕಪುರ ತಾಲೂಕಿನ ಕಬ್ಬಾಳು ಗ್ರಾಮದ ಬಳಿ ಈ ಒಂದು ದುರಂತ ಸಂಭವಿಸಿದೆ
ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕಿನ ಕಬ್ಬಾಳು ಗ್ರಾಮದಲ್ಲಿ ಕೆರೆಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿದ್ದಾರೆ. ಕೆರೆಯಲ್ಲಿ ಮುಳುಗಿ ಧನುಷ್ (18) ಹಾಗೂ ಸಂತೋಷ (18) ಸಾವನ್ನಪ್ಪಿದ್ದಾರೆ. ಮೃತ ವಿದ್ಯಾರ್ಥಿಗಳು ಬೆಂಗಳೂರಿನ ಕೋಣನಕುಂಟೆ ನಿವಾಸಿಗಳು ಎಂದು ತಿಳಿದುಬಂದಿದೆ.
ಬನಶಂಕರಿ ಬಳಿಯ ಖಾಸಗಿ ಕಾಲೇಜಿನಲ್ಲಿ ಇಬ್ಬರು ವ್ಯಾಸಂಗ ಮಾಡುತ್ತಿದ್ದರು. ನಿನ್ನೆ ಸ್ನೇಹಿತರ ಜೊತೆಗೆ ಇಬ್ಬರು ಕಬ್ಬಾಳು ದೇವಸ್ಥಾನಕ್ಕೆ ಬಂದಿದ್ದರು. ಈ ವೇಳೆ ಕೆರೆಯಲ್ಲಿ ಈಜಲು ಹೋದಾಗ ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಘಟನೆ ಕುರಿತು ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








