ಕೊಪ್ಪಳ : ಕೊಪ್ಪಳದಲ್ಲಿ ಬೆಳ್ಳಂ ಬೆಳ್ಳಿಗ್ಗೆ ಘೋರ ದುರಂತ ಒಂದು ಸಂಭವಿಸಿದ್ದು, ಮನೆಯಲ್ಲಿ ಅಡುಗೆ ಸಿಲಿಂಡರ್ ಸ್ಫೋಟಗೊಂಡು 7 ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಈ ಒಂದು ದುರಂತ ಸಂಭವಿಸಿದೆ.
ಘಟನೆಯಲ್ಲಿ ರಾಜು, ದುರ್ಗಪ್ಪ, ಸುರೇಶ್, ಹುಸೆನಮ್ಮ, ನಾಗರಾಜ್, ವಿಷ್ಣು, ಹುಲಿಗೆಮ್ಮ ಹಾಗೂ ಶ್ರೀಕಾಂತ್ ಗೆ ಗಂಭೀರವಾದ ಗಾಯಗಳಾಗಿದ್ದು ಎಲ್ಲರನ್ನೂ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮನೆಯಲ್ಲಿ ಹೊಸ ಗ್ಯಾಸ್ ಸಿಲಿಂಡರ್ ಅಳವಡಿಸುವಾಗ ಸಿಲಿಂಡರ್ ಸ್ಫೋಟಗೊಂಡಿದೆ. ಗಂಗಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








