ಉಡುಪಿ : ಪೊಲೀಸ್ ಮ್ಯಾರಥಾನ್ ವೇಳೆ ಕುಸಿದು ಬಿದ್ದು ಪಿಎಸ್ಐ ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಕುಂದಾಪುರ ಗ್ರಾಮಾಂತರ ಠಾಣೆ ಪಿಎಸ್ ಐ ನಾಸಿರ್ ಹುಸೇನ್ ಪೊಲೀಸ್ ಮ್ಯಾರಥಾನ್ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ಪಿಎಸ್ ಐ ನಾಸಿರ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಉಡುಪಿಯಲ್ಲಿ ಪೊಲೀಸ್ ಇಲಾಖೆ ಡ್ರಗ್ಸ್ ಮುಕ್ತ ಕರ್ನಾಟಕ ಧ್ಯೇಯದೊಂದಿಗೆ ಮ್ಯಾರಥಾನ್ ಆಯೋಜಿಸಲಾಗಿತ್ತು. ಈ ವೇಳೆ ಉಡುಪಿಯ ತಾ.ಪಂ. ಮುಂಭಾಗದ ರಸ್ತೆಯಲ್ಲಿ ಪಿಎಸ್ ಐ ನಾಸಿರ್ ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಾಸಿರ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ವೈದ್ಯರು ದೃಢಪಡಿಸಿದ್ದಾರೆ.








