ಬೆಳಗಾವಿ : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ರೆಡಿ ಆಗುತ್ತಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ಘಟನೆ ನಡೆದಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ರೆಡಿಯಾಗುತ್ತಿದ್ದ ವೇಳೆ ವಿದ್ಯಾರ್ಥಿನಿಗೆ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ.
ಸ್ನಾನ ಮುಗಿಸಿಕೊಂಡು ಹೊರ ಬರುವಾಗ ಭೂಮಿಕಾ (17) ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಭೂಮಿಕಾ ಮಾಳಗಿ ಸಾವನ್ನಪ್ಪಿದ್ದಾರೆ.ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.








