ಬೆಳಗಾವಿ : ಬೆಳಗಾವಿಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಪೈಪ್ ಲೈನ್ ಗೆ ಮಣ್ಣು ಅಗೆಯುವ ವೇಳೆ ಮಣ್ಣು ಕುಸಿದು ಬಿದ್ದು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಳಗಾವಿ ಸಮೀಪದ ಬೆಂಗಳೂರು-ಪುಣೆ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಪೈಪ್ ಲೈನ್ ಗಾಗಿ ಗುಂಡಿ ಅಗೆಯುವಾಗ ಗುಂಡಿಯಲ್ಲಿ ಇಳಿದಿದ್ದ ವೇಳೆ ಏಕಾಏಕಿ ಮಣ್ಣು ಕುಸಿದ ಬಿದ್ದ ಪರಿಣಾಮ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.