ಧಾರವಾಡ: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನಡೆಸುತ್ತಿದ್ದ ಉದ್ಯೋಗಾಕಾಂಕ್ಷಿ ಯುವತಿ ರೈಲು ಹಳಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ನಗರದ ಶಿವಗಿರಿಯಲ್ಲಿ ನಡೆದಿದೆ.
ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸಲೆಂದು ಬಂದಿದ್ದ ಯುವತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘೋರ ಧಾರವಾಡದ ತಪೋವನ ಬಳಿ ನಡೆದಿದೆ.
ಬಳ್ಳಾರಿ ಮೂಲಕ ಪಲ್ಲವಿ (22) ಆತ್ಮಹತ್ಯೆಗೆ ಶರಣಾದ ಯುವತಿ. ಸ್ಪರ್ಧಾತ್ಮಕ ಪರೀಕ್ಷೆ ಸಿದ್ಧತೆಯಲ್ಲಿದ್ದ ಯುವತಿ ಇಂದು ಬೆಳಿಗ್ಗೆ ಇದ್ದಕ್ಕಿದ್ದಂತೆ ರೈಲಿಗೆ ತಲೆಕೊಟ್ಟು ಸಾವಿಗೆ ಶರಣಾಗಿದ್ದಾಳೆ. ಯುವತಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಧಾರವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ








