ಧಾರವಾಡ : ಧಾರವಾಡ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಗಾಳಿ ಮಳೆಗೆ ನಿರ್ಮಾಣ ಹಂತದ ಗೋಡೆ ಕುಸಿದು ಇಬ್ಬರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಕಾಡನಕೊಪ್ಪ ಗ್ರಾಮದಲ್ಲಿ ನಿರ್ಮಾಣ ಹಂತದ ಕಾರ್ಖಾನೆ ಗೋಡೆ ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ಮೃತ ಕಾರ್ಮಿಕರನ್ನು ಹಳೇಹುಬ್ಬಳಿಯ ಧಾರವಾಡ ಫ್ಲಾಟ್ ನ ನಿವಾಸಿ ದಾವೂದ್ ಸವಣೂರು (32) ಹಾಗೂ ಹಳೇಹುಬ್ಬಳ್ಳಿ ನೂರಾನಿ ಫ್ಲಾಟ್ ನಿವಾಸಿ ರಫಿಕ್ ಸಾಬ್ ಚನ್ನಾಪುರ (50) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.