ಹಾಸನ : ಹಾಸನದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಸ್ನೇಹಿತರ ಜೊತೆ ಹೇಮಾವತಿ ನದಿಗೆ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ನಡೆದಿದೆ.
ಹಾಸನ ಜಿಲ್ಲೆಯ ಸಕಲೆಶಪುರ ತಾಲೂಕಿನ ಹೆನ್ನಲಿ ಗ್ರಾಮದಲ್ಲಿ ಸ್ನೇಹಿತರ ಜೊತೆ ಹೇಮಾವತಿ ನದಿಗೆ ಈಜಲು ಹೋಗಿದ್ದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಕಾಟಳ್ಳಿ ಗ್ರಾಮದ ಪ್ರಕಾಶ್ (29) ಹಾಗೂ ಚಿಕ್ಕಮಗಳೂರಿನ ಭರತ್ (27) ಮೃತರು.
ಸ್ನೇಹಿತರ ಜೊತೆಗೆ ಈಜಲು ಹೇಮಾವತಿ ನದಿಗೆ ಹೋಗಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಸಕಲೇಶಪುರ ಟೌನ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.