ಕೋಝಿಕ್ಕೋಡ್ : ಕೇರಳದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ನಾಲ್ವರು ಸಾವನ್ನಪ್ಪಿದ್ದಾರೆ.
ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿದ್ದು, ಈ ವೇಳೆ ದಟ್ಟ ಹೊಗೆಯಿಂದ ಉಸಿರುಗಟ್ಟಿ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ, ಮೃತರ ಕುಟುಂಬದವರೊಂದಿಗೆ ಮಾತನಾಡಿದ್ದು, ಮೃತದೇಹಗಳನ್ನು ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ ಎಂದು ಶಾಸಕ ಟಿ ಸಿದ್ದಿಕ್ ಮಾಹಿತಿ ನೀಡಿದ್ದಾರೆ.
ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ರಾತ್ರಿ 8 ಗಂಟೆ ಸುಮಾರಿಗೆ ಶಾರ್ಟ್ ಸರ್ಕ್ಯೂಟ್ ನಿಂದ ತುರ್ತು ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತುರ್ತು ಚಿಕಿತ್ಸಾ ವಿಭಾಗದಿಂದ ದಟ್ಟ ಹೊಗೆ ಕಾಣಿಸಿಕೊಂಡಿದ್ದರಿಂದ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮುನ್ನೆಚ್ಚರಿಕೆಯಾಗಿ 200 ಕ್ಕೂ ಹೆಚ್ಚು ರೋಗಿಗಳನ್ನು ತುರ್ತು ಚಿಕಿತ್ಸಾ ವಿಭಾಗದಿಂದ ತುರ್ತು ವೈದ್ಯಕೀಯ ಉಪಕರಣಗಳೊಂದಿಗೆ ಸ್ಥಳಾಂತರಿಸಲಾಗಿದ್ದು, ಸದ್ಯ ಗಾಯಗೊಂಡವರಿಗೆ ಚಿಕಿತ್ಸೆ ಮುಂದುವರೆದಿದೆ.