ಬೆಂಗಳೂರು : ರಾಜ್ಯಾಧ್ಯಂತ ಬೈಕ್ ಟ್ಯಾಕ್ಸಿ ಸೇವೆಗಳನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶಿಸಿತ್ತು. ಬೆಂಗಳೂರಿನಲ್ಲಿ ನಿಷೇಧದ ನಡುವೆ ಬೈಕ್ ಟ್ಯಾಕ್ಸಿ ಚಲಾಯಿಸಿದ 103 ಸವಾರರಿಗೆ ತಲಾ 5000 ದಂಡ ವಿಧಿಸಲಾಗಿದೆ.
ಹೌದು. ‘ಬೈಕ್ ಟ್ಯಾಕ್ಸಿ’ ವಿರುದ್ಧ ಸಾರಿಗೆ ಇಲಾಖೆ ಸಮರ ನಡೆಸುತ್ತಿದ್ದು, ಬೆಂಗಳೂರಲ್ಲಿ ನಿನ್ನೆ ಒಂದೇ ದಿನ 103 ಬೈಕ್ ಟ್ಯಾಕ್ಸಿ ಸೀಜ್ ಮಾಡಲಾಗಿದೆ. 103 ಸವಾರರಿಗೆ ತಲಾ 5000 ದಂಡ ಹಾಕಲಾಗಿದೆ.
ನಿನ್ನೆಯಿಂದ ರಾಜ್ಯದಲ್ಲಿ ಅನಧಿಕೃತ ಬೈಕ್ ಟ್ಯಾಕ್ಸಿ ಸೇವೆಗಳ ಸಂಚಾರಕ್ಕೆ ಬ್ರೇಕ್ ಹಾಕಲಾಗಿತ್ತು. ಇದರ ನಡುವೆ ಸಂಚರಿಸುತ್ತಿದ್ದಂತ 103 ಬೈಕ್ ಟ್ಯಾಕ್ಸಿಗಳನ್ನು ಸಾರಿಗೆ ಇಲಾಖೆಯಿಂದ ಸೀಜ್ ಮಾಡಲಾಗಿದೆ.
ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಆರ್ ಟಿ ಓ ಅಡಿಷನಲ್ ಕಮೀಷನರ್ ಮಲ್ಲಿಕಾರ್ಜುನ ಅವರು, ಹೈಕೋರ್ಟ್ ಇಂದಿನಿಂದ ಬೈಕ್ ಟ್ಯಾಕ್ಸಿ ಸಂಚಾರವನ್ನು ನಿಷೇಧಿಸಿತ್ತು. ಹೀಗಿದ್ದರೂ ಅನಧಿಕೃತವಾಗಿ ನಗರದಲ್ಲಿ ಸಂಚರಿಸುತ್ತಿದ್ದಂತ 103 ಬೈಕ್ ಟ್ಯಾಕ್ಸಿಗಳನ್ನು ಸೀಜ್ ಮಾಡಿರುವುದಾಗಿ ತಿಳಿಸಿದ್ದಾರೆ.
ಕರ್ನಾಟಕ ಹೈಕೋರ್ಟ್ ಬೈಕ್ ಟ್ಯಾಕ್ಸಿ ಸೇವೆ ಅನಧಿಕೃತ ಎಂಬುದಾಗಿ ಆದೇಶಿಸಿದೆ. ಕಾನೂನಡಿ ಬೈಕ್ ಟ್ಯಾಕ್ಸಿ ಸಂಚಾರಕ್ಕೆ ಅವಕಾಶವಿಲ್ಲ ಎಂದು ಹೇಳಿದೆ. ಹೀಗಾಗಿ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸಂಚಾರದ ವಿರುದ್ಧ ಕಾರ್ಯಾಚರಣೆ ಆರಂಭಿಸಿದ್ದೇವೆ ಎಂದರು.
ವೈಟ್ ಬೋರ್ಡ್ ವಾಹನವನ್ನು ಕಮರ್ಷಿಯಲ್ ಸೇವೆಗೆ ಬಳಸಲು ಅವಕಾಶವಿಲ್ಲ. ವೈಟ್ ಬೋರ್ಟ್ ಬೈಕ್ ಅಲ್ಲದೇ ಕಾರನ್ನು ಬಳಸುವಂತಿಲ್ಲ. ಈ ಹಿಂದಯೇ ಸಾರಿಗೆ ಇಲಾಖೆ ಬೈಕ್ ಟ್ಯಾಕ್ಸಿಗಳಿಗೆ ಅನುಮತಿ ನೀಡಿಲ್ಲ. ಒಂದು ವೇಳೆ ಅನಧಿಕೃತವಾಗಿ ಕಾರ್ಯಾಚರಣೆ ನಡೆಸಿದರೇ, ಕಾರ್ಯಾಚರಣೆ ಮುಂದುವರೆಸುವುದಾಗಿ ಎಚ್ಚರಿಸಿದರು.