Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಅರ್ಹರು ಕೈಬಿಡದಂತೆ ಚುನಾವಣಾ ಆಯೋಗಕ್ಕೆ MLC ರಮೇಶ್ ಬಾಬು ಪತ್ರ

ಸ್ಮಾರ್ಟ್‌ಫೋನ್ ಖರೀದಿಸುವಾಗ ಜಾಗ್ರತೆ! ಅಸಲಿ ಮತ್ತು ನಕಲಿ ಮೊಬೈಲ್ ಪತ್ತೆಹಚ್ಚಲು ಪ್ರತಿಯೊಬ್ಬರೂ ತಿಳಿಯಬೇಕಾದ 5 ಸುಲಭ ವಿಧಾನಗಳು ಇಲ್ಲಿವೆ!

BREAKING: ಬೆಳ್ಳಿಯ ಆಮದಿಗೆ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ | silver bar imports

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ವೃಕ್ಷಮಾತೆ `ಸಾಲುಮರದ ತಿಮ್ಮಕ್ಕ’ ಇನ್ನಿಲ್ಲ | Thimmakka is no more
KARNATAKA

BREAKING : ವೃಕ್ಷಮಾತೆ `ಸಾಲುಮರದ ತಿಮ್ಮಕ್ಕ’ ಇನ್ನಿಲ್ಲ | Thimmakka is no more

By kannadanewsnow57

ಬೆಂಗಳೂರು: ವೃಕ್ಷಮಾತೆ ಎಂದೇ ಹೆಸರಾಗಿರುವಂತ ಸಾಲುಮರದ ತಿಮ್ಮಕ್ಕ ಅವರು ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಸಾಲುಮರದ ತಿಮ್ಮಕ್ಕ – ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದ್ದಾಳೆ.[೧] ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್‌ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.

ಜೀವನ
ತಿಮ್ಮಕ್ಕ ಅವರು ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ ಜನಿಸಿದರು. ತಂದೆ ಚಿಕ್ಕರಂಗಯ್ಯ; ತಾಯಿ ವಿಜಯಮ್ಮ. ಇವರಿಗೆ ಯಾವುದೇ ಔಪಚಾರಿಕ ಶಿಕ್ಷಣ ಲಭ್ಯವಾಗದೆ ಹತ್ತಿರದ ಒಂದು ಕಲ್ಲು ಗಣಿಯಲ್ಲಿ ದಿನಗೂಲಿ ನೌಕರರಾಗಿ ಕೆಲಸ ಮಾಡಿದರು. ಇವರು ಚಿಕ್ಕಯ್ಯ ಎಂಬ ಒಬ್ಬ ದನಕಾಯುವವರನ್ನು ಮದುವೆಯಾಗಿದ್ದು, ಅವರು ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಹುಲಿಕಲ್ ಗ್ರಾಮದವರು. ದುರದೃಷ್ಟವಶಾತ್, ಇವರಿಗೆ ಮಕ್ಕಳಿರಲಿಲ್ಲ. ತಿಮ್ಮಕ್ಕ ಅವರು ತಮಗೆ ಮಕ್ಕಳಿರದ ದುಃಖವನ್ನು ಮರೆಯಲು ಆಲದ ಮರಗಳನ್ನು ನೆಡಲಾರಂಭಿಸಿದರು ಎಂದು ಹೇಳಲಾಗಿದೆ.

ಕುದೂರಿನಿಂದ ಹುಲಿಕಲ್ ತನಕವಿರುವ ರಾಜ್ಯ ಹೆದ್ದಾರಿ ೯೪ರಲ್ಲಿ ತಿಮ್ಮಕ್ಕರವರು ಬೆಳಸಿದ ಆಲದ ಮರಗಳು. ತಿಮ್ಮಕ್ಕ ಅವರ ಹಳ್ಳಿಯ ಬಳಿ ಆಲದ ಮರಗಳು ಹೇರಳವಾಗಿದ್ದವು. ತಿಮ್ಮಕ್ಕ ಮತ್ತು ಅವರ ಪತಿ ಈ ಮರಗಳಿಂದ ಸಸಿಗಳನ್ನು ಕಸಿಮಾಡಲು ಆರಂಭಿಸಿದರು. ಮೊದಲ ವರ್ಷದಲ್ಲಿ ಹತ್ತು ಸಸಿಗಳನ್ನು ನೆರೆಯ ಕುದೂರು ಹಳ್ಳಿಯ ಬಳಿ ೪ ಕಿ.ಮೀ. ಉದ್ದಳತೆಯ ದೂರ ನೆಡಲಾಯಿತು. ಹೀಗೆಯೇ ಎರಡನೇ ವರ್ಷ ಹದಿನೈದು ಮತ್ತು ಮೂರನೇ ವರ್ಷ ೨೦ ಸಸಿಗಳನ್ನು ನೆಡಲಾಯಿತು.

ಇವರು ಈ ಸಸಿಗಳನ್ನು ನೆಡಲು ತಮ್ಮ ಅತ್ಯಲ್ಪ ಆದಾಯವನ್ನೇ ಬಳಸಿದರು.[೩] ಈ ಗಂಡ-ಹೆಂಡಿರು ಸಸಿಗಳಿಗೆ ನೀರುಣಿಸಲು ಬಿಂದಿಗೆ ಕೊಳಗಗಳಲ್ಲಿ ನೀರನ್ನು ನಾಲ್ಕು ಕಿ.ಮೀ. ದೂರ ಸಾಗಿಸುತ್ತಿದ್ದರು. ಹಾಗೂ ಸಸಿಗಳನ್ನು ಮೇವಿನ ಜಾನುವಾರುಗಳ ಕಾಟದಿಂದ ತಪ್ಪಿಸಲು ಅವುಗಳ ಸುತ್ತ ಮುಳ್ಳು ಪೊದೆಗಳನ್ನು ಹೊದಿಸಿ ಕಾಪಾಡಿದರು. ಸಸಿಗಳು ಬೆಳೆಯಲು ನೀರಿನ ಅವಶ್ಯಕತೆಯಿರುವುದರಿಂದ, ಅವಗಳನ್ನು ಹೆಚ್ಚಾಗಿ ಮುಂಗಾರು ಮಳೆಯ ಕಾಲದಲ್ಲಿ ನೆಡಲಾಯಿತು.

ತಿಮ್ಮಕ್ಕನವರ ಸಾಧನೆಯ ಪಲಕ

ಮುಂದಿನ ಮುಂಗಾರಿನಷ್ಟು ಹೊತ್ತಿಗೆ ಈ ಎಲ್ಲ ಸಸಿಗಳು ಚೆನ್ನಾಗಿ ಬೇರು ಬಿಟ್ಟಿದ್ದವು.[೪] ಒಟ್ಟಾರೆ ೨೮೪ ಸಸಿಗಳನ್ನು ನೆಡಲಾಗಿ, ಇಂದಿಗೆ ಅವುಗಳ ಮೌಲ್ಯವು ಸುಮಾರು ೧೫ ಲಕ್ಷ ರೂಪಾಯಿಗಳೆಂದು ಅಂದಾಜು ಮಾಡಲಾಗಿದೆ.[೧] ಈ ಮರಗಳ ನಿರ್ವಹಣೆಯನ್ನು ಈಗ ಕರ್ನಾಟಕ ಸರ್ಕಾರವು ವಹಿಸಿಕೊಂಡಿದೆ.[೩]

ಪ್ರಶಸ್ತಿ, ಗೌರವ
ತಮ್ಮ ಸಾಧನೆಗಾಗಿ ತಿಮ್ಮಕ್ಕ ಅವರಿಗೆ ಈ ಕೆಳಗಿನ ಸನ್ಮಾನಗಳು ಮತ್ತು ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗಿದೆ.

ರಾಷ್ಟ್ರೀಯ ಪೌರ ಪ್ರಶಸ್ತಿ – ೧೯೯೫[೪]
ಇಂದಿರಾ ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿ – ೧೯೯೭[೪]
ವೀರಚಕ್ರ ಪ್ರಶಸ್ತಿ – ೧೯೯೭
ಮಹಿಳಾ ಮತ್ತು ಶಿಶು ಕಲ್ಯಾಣ ಇಲಾಖೆ, ಕರ್ನಾಟಕ ಸರ್ಕಾರ – ಇವರಿಂದ ಮಾನ್ಯತೆಯ ಪ್ರಮಾಣ ಪತ್ರ
ಭಾರತೀಯ ವೃಕ್ಷ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ, ಬೆಂಗಳೂರು – ಇವರಿಂದ ಶ್ಲಾಘನೆಯ ಪ್ರಮಾಣ ಪತ್ರ.
ಕರ್ನಾಟಕ ಕಲ್ಪವಲ್ಲಿ ಪ್ರಶಸ್ತಿ – ೨೦೦೦
ಗಾಡ್‌ಫ್ರಿ ಫಿಲಿಪ್ಸ್ ಧೀರತೆ ಪ್ರಶಸ್ತಿ – ೨೦೦೬
ಪಂಪಾಪತಿ ಪರಿಸರ ಪ್ರಶಸ್ತಿ
ಬಾಬಾಸಾಹೇಬ್ ಅಂಬೇಡ್ಕರ್ ಪ್ರಶಸ್ತಿ
ವನಮಾತೆ ಪ್ರಶಸ್ತಿ
ಮಾಗಡಿ ವ್ಯಕ್ತಿ ಪ್ರಶಸ್ತಿ
ಶ್ರೀಮಾತಾ ಪ್ರಶಸ್ತಿ
ಎಚ್.ಹೊನ್ನಯ್ಯ ಸಮಾಜ ಸೇವಾ ಪ್ರಶಸ್ತಿ
ಕರ್ನಾಟಕ ಪರಿಸರ ಪ್ರಶಸ್ತಿ
ಮಹಿಳಾರತ್ನ ಪ್ರಶಸ್ತಿ
ನ್ಯಾಷನಲ್ ಸಿಟಿಜನ್ ಪ್ರಶಸ್ತಿ
ರಾಜ್ಯೋತ್ಸವ ಪ್ರಶಸ್ತಿ
ಹೂವಿನಹೊಳೆ ಪ್ರತಿಷ್ಠಾನ Archived 2021-05-18 ವೇಬ್ಯಾಕ್ ಮೆಷಿನ್ ನಲ್ಲಿ.ದ ವಿಶ್ವಾತ್ಮ ಪುರಸ್ಕಾರ ೨೦೧೫
ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ವಿಶಾಲಾಕ್ಷಿ ಪ್ರಶಸ್ತಿ.
೨೦೧೦ರ ಸಾಲಿನ ಪ್ರತಿಷ್ಠಿತ ‘ನಾಡೋಜ’ ಪ್ರಶಸ್ತಿ ಲಭಿಸಿದೆ.
೨೦೧೯ ರ ಗಣರಾಜ್ಯೋತ್ಸವ ಸಂದರ್ಭದಲ್ಲಿ ಅವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.
೨೦೨೦ರಲ್ಲಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ [

BREAKING: Tree mother `Salumarada Thimmakka’ is no more | Thimmakka is no more
Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಅರ್ಹರು ಕೈಬಿಡದಂತೆ ಚುನಾವಣಾ ಆಯೋಗಕ್ಕೆ MLC ರಮೇಶ್ ಬಾಬು ಪತ್ರ

2 Mins Read

ಬೆಲೆ ಏರಿಕೆ ವಿರುದ್ಧ ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಎತ್ತಿನಗಾಡಿ ಚಳುವಳಿ: ‘ಕರ್ನಾಟಕ ಬಂದ್’ ಎಚ್ಚರಿಕೆ!

2 Mins Read

ಮಂಡ್ಯದ ಗೆಜ್ಜಲಗೆರೆ ಹೋರಾಟ: ರೈತ ಮುಖಂಡರ ಜೊತೆಗೆ ಶಾಸಕ ಕೆ.ಎಂ. ಉದಯ್ ಚರ್ಚೆ

2 Mins Read
Recent News

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಅರ್ಹರು ಕೈಬಿಡದಂತೆ ಚುನಾವಣಾ ಆಯೋಗಕ್ಕೆ MLC ರಮೇಶ್ ಬಾಬು ಪತ್ರ

ಸ್ಮಾರ್ಟ್‌ಫೋನ್ ಖರೀದಿಸುವಾಗ ಜಾಗ್ರತೆ! ಅಸಲಿ ಮತ್ತು ನಕಲಿ ಮೊಬೈಲ್ ಪತ್ತೆಹಚ್ಚಲು ಪ್ರತಿಯೊಬ್ಬರೂ ತಿಳಿಯಬೇಕಾದ 5 ಸುಲಭ ವಿಧಾನಗಳು ಇಲ್ಲಿವೆ!

BREAKING: ಬೆಳ್ಳಿಯ ಆಮದಿಗೆ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ | silver bar imports

Shocking: ಕೇವಲ 2,000 ರೂ. ಮನೆ ಬಾಡಿಗೆ ಕೊಡಲಾಗದಿದ್ದಕ್ಕೆ ಪತ್ನಿ, ಅಪ್ರಾಪ್ತ ಮಗಳ ಮೇಲಿನ ಅತ್ಯಾಚಾರಕ್ಕೆ ಸಾಥ್ ನೀಡಿದ ಪಾಪಿ ಪತಿ!

State News
KARNATAKA

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಅರ್ಹರು ಕೈಬಿಡದಂತೆ ಚುನಾವಣಾ ಆಯೋಗಕ್ಕೆ MLC ರಮೇಶ್ ಬಾಬು ಪತ್ರ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗವು ಮೂರನೇ ಹಂತದ ವಿಶೇಷ ಸಮಗ್ರ ಪರಿಷ್ಕರಣೆ (SIR) ಅಡಿಯಲ್ಲಿ ದೇಶದ 16 ರಾಜ್ಯಗಳು ಹಾಗೂ…

ಬೆಲೆ ಏರಿಕೆ ವಿರುದ್ಧ ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಎತ್ತಿನಗಾಡಿ ಚಳುವಳಿ: ‘ಕರ್ನಾಟಕ ಬಂದ್’ ಎಚ್ಚರಿಕೆ!

ಮಂಡ್ಯದ ಗೆಜ್ಜಲಗೆರೆ ಹೋರಾಟ: ರೈತ ಮುಖಂಡರ ಜೊತೆಗೆ ಶಾಸಕ ಕೆ.ಎಂ. ಉದಯ್ ಚರ್ಚೆ

ಬಿಡದಿ ಟೌನ್‌ಶಿಪ್ ಪ್ರಾಜೆಕ್ಟ್ ಬಿಟ್ಟುಬಿಡಿ: ಹೆಚ್.ಡಿ. ಕುಮಾರಸ್ವಾಮಿ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯಗೆ ಮಾಜಿ ಪ್ರಧಾನಿ ಹೆಚ್‌ಡಿಡಿ ಪತ್ರ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.