ಉತ್ತರಕನ್ನಡ : ಒಂದೆಡೆ ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತ ಅಬ್ಬರಿಸುತ್ತಿದ್ದು ತಮಿಳುನಾಡು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲೂ ಈ ಒಂದು ಚಂಡಮಾರುತದ ಪರಿಣಾಮದಿಂದ ಮಳೆ ಆಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಇನ್ನೊಂದೆಡೆ, ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಇದೀಗ ಭೂಕಂಪನದ ಅನುಭವವಾಗಿದೆ.
ಹೌದು ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭೂಕಂಪನದ ಅನುಭವವಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ದೇವಿ ಮನೆ ಘಟ್ಟ, ಶಿರಸಿ ತಾಲೂಕಿನ ರಾಗಿಹೊಸಳ್ಳಿ ಕಸಗೆ, ಬಂಡಳದಲ್ಲಿ ಭೂಮಿ ಕಂಪಿಸಿದೆ. 2 ತಾಲೂಕುಗಳ ಹಲವು ಪ್ರದೇಶಗಳಲ್ಲಿ 3 ಸೆಕೆಂಡ್ ಗಳ ವರೆಗೆ ಭೂಮಿ ಕಂಪಿಸಿದ ಅನುಭವ ಆಗಿದೆ.