ಚಿಕ್ಕಮಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಾಲಲ್ಲಿ ಅವರ ಅಶ್ಲೀಲ ವಿಡಿಯೋಗಳು ಹರಿದಾಡಿದ್ದವು. ಇದೀಗ ಅಶ್ಲೀಲ ವಿಡಿಯೋ ಹಾಗೂ ಫೋಟೋ ಅಪ್ಲೋಡ್ ಮಾಡಿದ್ದ ಟ್ರೊಲ್ ಅಡ್ಮಿನ್ ಪ್ರಜ್ವಲ್ ಎನ್ನುವ ವ್ಯಕ್ತಿಯನ್ನ ಅನ್ನು ಪೊಲೀಸರು ಚಿಕ್ಕಮಂಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಸಂಸೆ ಗ್ರಾಮದಲ್ಲಿ ಬಂಧಿಸಿದ್ದಾರೆ.
ಹೌದು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಶ್ರೀಲ ವಿಡಿಯೋ ಪ್ರಕರಣ ಕುರಿತು ದೂರು ದಾಖಲಾಗುತ್ತಿದ್ದಂತೆ, ಅವರ ಅಶೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡಲಾಗಿತ್ತು. ಇದೀಗ ಅಶ್ಲೀಲ ವಿಡಿಯೋಗಳನ್ನು ಹರಿಬಿಟ್ಟ ಟ್ರೋಲ್ ಪೇಜ್ ಅಡ್ಮಿನ್ ನನ್ನು ಕುದುರೆಮುಖ ಠಾಣೆ ಪೊಲೀಸರು ಬಂಧಿದ್ದಾರೆ ಎಂದು ತಿಳಿದು ಬಂದಿದೆ.
ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ವಿರುದ್ಧ ಇಂದು ಕೂಡ ಸಂತ್ರಸ್ತ ಮಹಿಳೆ ಒಬ್ಬಳು ಪ್ರಜ್ವಲ್ ವಿರುದ್ಧ FIR ದಾಖಲಾಗಿದ್ದು, ಮತ್ತೊಂದು ಈಗಾಗಲೇ ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿದ್ದು ಅಲ್ಲಿಂದಲೇ ಕಾನೂನು ಹೋರಾಟ ನಡೆಸುತ್ತಿದ್ದಾರೆ. ಪ್ರಜ್ವಲ್ ಅವರಿಗೆ ಈಗಾಗಲೇ ಹಲವಾರು ಬಾರಿ ನೋಟಿ ನೀಡಲಾಗಿದ್ದು ಆದರೂ ಕೂಡ ಅವರು ಎಸ್ಐಟಿ ವಿಚಾರಣೆಗೆ ಹಾಜರಾಗಿಲ್ಲ.
ಹಾಗಾಗಿ ಆ ಪ್ರಜ್ವಲ್ ವಿರುದ್ಧ ಎಸ್ಐಟಿ ಅಧಿಕಾರಿಗಳು ಸಿಬಿಐ ಮುಖಾಂತರ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿದೆ. ಅಲ್ಲದೆ ಕಳೆದ ಎರಡು ದಿನಗಳ ಹಿಂದೆ ಎಸ್ಐಟಿ ಒಂದು ತಂಡ ಪ್ರಜ್ವಲ್ ರೇವಣ್ಣ ಅವರನ್ನು ವಿದೇಶದಲ್ಲಿಯೇ ಬಂಧಿಸಿ ಭಾರತಕ್ಕೆ ಕರೆ ತರಲು ವಿದೇಶಕ್ಕೆ ತೆರಳಿದೆ ಎಂದು ಬಲಮೂಲಗಳಿಂದ ತಿಳಿದುಬಂದಿದೆ. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಪ್ರಜ್ವಲ್ ಅವರ ಅಶೀಲ ವಿಡಿಯೋಗಳನ್ನು ಹರಿಬಿಟ್ಟಿದ್ದ ಟ್ರೊಲ್ ಪೇಜ್ ಅಡ್ಮಿನ್ ನನ್ನು ಕುದುರೆಮುಖ ಠಾಣೆ ಪೋಲಿಸರು ಬಂಧಿಸಿದ್ದಾರೆ.