ಪುಣೆ : ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟ್ರಕ್ ಡಿಕ್ಕಿ ಹೊಡೆದು 4 ಅಪ್ರಾಪ್ತ ವಯಸ್ಕರು ಸಾವನ್ನಪ್ಪಿದ್ದಾರೆ, ಇಬ್ಬರು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ.
ಆರ್ಮೋರಿ-ಗಡ್ಚಿರೋಲಿ ಹೆದ್ದಾರಿಯಲ್ಲಿ ಬೆಳಿಗ್ಗೆ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ಟ್ರಕ್ ಡಿಕ್ಕಿ ಹೊಡೆದು 4 ಅಪ್ರಾಪ್ತ ಮಕ್ಕಳು ಸಾವನ್ನಪ್ಪಿದ್ದಾರೆ, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಜಿಲ್ಲಾ ಕೇಂದ್ರದಿಂದ 12 ಕಿಮೀ ದೂರದಲ್ಲಿರುವ ಕಟ್ಲಿ ಗ್ರಾಮದಲ್ಲಿ ರಸ್ತೆಯ ಬದಿಯಲ್ಲಿ ಕುಳಿತಿದ್ದ 12 ರಿಂದ 16 ವರ್ಷ ವಯಸ್ಸಿನ 6 ಮಕ್ಕಳಿಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಡಿಕ್ಕಿಯಲ್ಲಿ ನಾಲ್ವರು ಮಕ್ಕಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.