ಬೆಂಗಳೂರು : ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕೆಟ್ಟು ನಿಂತಿದ್ದ ವಿಮಾನಕ್ಕೆ ಟಿಟಿ ಡಿಕ್ಕಿಯಾಗಿದ್ದು, ಭಾರೀ ದುರಂತವೊಂದು ತಪ್ಪಿದೆ.
ನಿನ್ನೆ ಸಂಜೆ ಈ ಘಟನೆ ನಡೆದಿದ್ದು, ಡಿಕ್ಕಿ ರಭಸಕ್ಕೆ ಟಿಟಿ ವಾಹನದ ಟಾಪ್ ನಜ್ಜುಗುಜ್ಜಾಗಿದೆ. ಸಣ್ಣಪುಟ್ಟ ಗಾಯಗಳಿಂದ ಟಿಟಿ ಚಾಲಕ ಪಾರಾಗಿದ್ದಾರೆ. ಕೂದಲೆಳೆ ಅಂತರದಲ್ಲಿ ಭಾರಿ ದುರಂತ ತಪ್ಪಿದೆ.
ಕೆಲ ದಿನಗಳಿಂದ ಕೆಟ್ಟು ನಿಂತಿದ್ದ ಇಂಡಿಗೋ ವಿಮಾನ. ಚಾಲಕನ ಅಜಾಗರೂಕತೆಯಿಂದ ಡಿಕ್ಕಿ ಹೊಡೆದಿದೆ. ಟಿಟಿಯಲ್ಲಿ ಪ್ರಯಾಣಿಕರನ್ನು ಬಿಟ್ಟು ಬರುವಾಗ ಈ ಘಟನೆ ನಡೆದಿದೆ. ಸಿಬ್ಬಂದಿ ಬಿಟ್ಟು ಬರುವಾಗ ನಿಂತಿದ್ದ ವಿಮಾನಕ್ಕೆ ಟಿಟಿ ವಾಹನ ಡಿಕ್ಕಿಯಾಗಿದೆ. ಘಟನೆಯ ಬಗ್ಗೆ ನಾಗರಿಕ ವಿಮಾನಯಾನ ಇಲಾಖೆಯಿಂದ ತನಿಖೆ ಕೈಗೊಳ್ಳಲಾಗಿದೆ.