ಚಿಕ್ಕಮಗಳೂರು : ನಿನ್ನೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ರಾಕ್ಷಸನೊಬ್ಬ ರಸ್ತೆಯ ಮೇಲೆ ಮಲಗಿದ್ದ ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿದ್ದ. ಇಂದು ಪೊಲೀಸರು ಆತನನ್ನು ಅರೆಸ್ಟ್ ಮಾಡಿದ್ದಾರೆ. ಈ ಒಂದು ಘಟನೆ ಮಾಸುವ ಮುನವೇ ಚಿಕ್ಕಮಂಗಳೂರಿನಲ್ಲಿ ಸ್ವೀಟ್ ಮಾರಾಟ ಮಾಡುವ ನೆಪದಲ್ಲಿ ಗೋಮಾಂಸ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಹೌದು ಸ್ವೀಟ್ ಮಾರಾಟ ಮಾಡುವ ನೆಪದಲ್ಲಿ ಇಬ್ಬರು ಆರೋಪಿಗಳು ಗೋಮಾಂಸ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ಚಿಕ್ಕಮಂಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದಲ್ಲಿ ಒಂದು ಘಟನೆ ಬೆಳಕಿಗೆ ಬಂದಿದೆ. ಅಸ್ಸಾಮಿನಿಂದ ಬಂದು ಸಂತೆಯಲ್ಲಿ ಸ್ವೀಟ್ ಜೊತೆಗೆ ಗೋಮಾಂಸ ಮಾರಾಟ ಮಾಡಲಾಗುತ್ತಿತ್ತು.
ಅಕ್ರಮ ಬಾಂಗ್ಲಾದೇಶ ನಿವಾಸಿಗಳು ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ಸ್ವೀಟ್ ಡಬ್ಬದ ಪಕ್ಕದಲ್ಲಿನ ಬ್ಲಾಕ್ ಬ್ಯಾಗ್ ನಲ್ಲಿ ಗೋಮಾಂಸ ಪತ್ತೆಯಾಗಿದೆ. ಗೋಮಾಂಸದ ಸಮೇತ ಪೊಲೀಸರು ಮಾರಾಟಗಾರರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಾಫಿ ತೋಟದ ಕೆಲಸಕ್ಕೆ ಬಂದಿದ್ದವರಿಂದ ಗೋಮಾಂಸ ಮಾರಾಟ ಮಾಡಲಾಗುತ್ತಿದೆ. ಬಣಕಲ್ ಪೊಲೀಸರಿಂದ ಅಸ್ಸಾಂ ಮೂಲದ ಇಬ್ಬರು ವ್ಯಕ್ತಿಗಳನ್ನು ಇದೀಗ ಅರೆಸ್ಟ್ ಮಾಡಿದ್ದಾರೆ.