ಬೆಂಗಳೂರು : ಆಟೋದಲ್ಲಿ ತೆರಳುತ್ತಿದ್ದ ಯುವತಿಯರನ್ನು ಚುಡಾಯಿಸಿದ ಇಬ್ಬರು ಕಿಡಿಗೇಡಿಗಳನ್ನು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಠಾಣೆಯ ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ.
ಬಂಧಿತ ಆರೋಪಿಗಳನ್ನು ಬನಶಂಕರಿ ನಿವಾಸಿಗಳಾದ ಮುಬಾರಕ್ ಹಾಗು ಹಫೀಫ್ ಆರೋಪಿಗಳು ಎಂದು ತಿಳಿದುಬಂದಿದ್ದು, ಏಪ್ರಿಲ್ 23 ರಂದು ಬೆಂಗಳೂರಿನ ಸಾರಕ್ಕಿ ಮಾರುಕಟ್ಟೆಯ ಬಳಿ ಈ ಒಂದು ಘಟನೆ ನಡೆದಿತ್ತು. ಬೈಕ್ ನಲ್ಲಿ ಬಂದು ಆಟೋ ಅಡ್ಡಗಟ್ಟಿ ಇಬ್ಬರೂ ಕಿಡಿಗೇಡಿಗಳು ಯುವತಿಯರನ್ನು ಚುಡಾಯಿಸಿದ್ದರು.ಅಲ್ಲದೇ ಯುವತಿಯರ ತಾಯಿಗೂ ಕೂಡ ಆರೋಪಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.
ಘಟನೆ ಕುರಿತಂತೆ ಕುಮಾರಸ್ವಾಮಿ ಲೇಔಟ್ ಠಾಣೆಗೆ ಯುವತಿಯರ ತಾಯಿ ಈ ಸಂಬಂಧ ದೂರು ನೀಡಿದ್ದರು. ಯುವತಿಯರ ತಾಯಿಯ ದೂರು ಆಧರಿಸಿ ಆರೋಪಿಗಳ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದರು. ಇದೀಗ ಆರೋಪಿಗಳನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ.