ಹಾವೇರಿ : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿದ್ದಲ್ಲದೆ, ಮುಸ್ಲಿಂ ಧರ್ಮಕ್ಕೆ ಮತಾಂತರ ಆಗುವಂತೆ ಒತ್ತಡ ಹೇಳಿರುವ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದು, ಘಟನೆಗೆ ಸಂಬಂಧಿಸಿದಂತೆ ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಹೌದು ಅಪ್ರಾಪ್ತ ಬಾಲಕಿಗೆ ಮತಾಂತರಕ್ಕೆ ಒತ್ತಾಯ ಮಾಡಿರುವ ಆರೋಪ ಕೇಳಿ ಬಂದಿದ್ದು, ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಈ ಕುರಿತಂತೆ ಪ್ರಕರಣ ದಾಖಲಾಗಿದೆ. ಮುಸ್ಲಿಂ ಧರ್ಮಕ್ಕೆ ಮತಾಂತರವಾಗಲು ಅಪ್ರಾಪ್ತ ಬಾಲಕಿಗೆ ಒತ್ತಾಯ ಮಾಡಿರುವ ಆರೋಪ ಕೇಳಿ ಬಂದಿದೆ. ಲೈಂಗಿಕ ದೌರ್ಜನ್ಯ ಎಸಗಿ, ಮತಾಂತರಕ್ಕೆ ಯತ್ನಿಸಿರುವ ಆರೋಪ ಕೇಳಿ ಬಂದಿದೆ.
ಅಲ್ಲದೇ ಆರೋಪಿ ಮದುವೆ ಆಗುತ್ತೇನೆ ಅಂತ ಬೆದರಿಕೆ ಹಾಕಿದ ಆರೋಪ ಕೂಡ ಕೇಳಿಬಂದಿದೆ. ಈ ಕುರಿತಂತೆ ಕರ್ಜಗಿ ಗ್ರಾಮದ ಇಬ್ಬರು ಆರೋಪಿಗಳ ವಿರುದ್ಧ ಕೇಸ್ ದಾಖಲಾಗಿದ್ದು, ಮಹಬೂಬ್ ಅಲಿ (28) ಹಾಗೂ ಸೋಯಲ್ ಸಾಬ್ (20) ಎನ್ನುವ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣದ ಅಡಿ ಕೇಸ್ ದಾಖಲಾಗಿದೆ.