ಮಂಗಳೂರು : ರಾಜ್ಯದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಮಂಗಳೂರಿನಲ್ಲಿ ವಿದ್ಯುತ್ ಶಾಕ್ ಗೆ ಇಬ್ಬರು ಆಟೋಚಾಲಕರು ಬಲಿಯಾಗಿರುವ ಘಟನೆ ನಡೆದಿದೆ.
ರಾಜ್ಯದಲ್ಲಿ ಮಳೆ ಆರ್ಭಟ ಜೋರಾಗಿದ್ದು, ನಿನ್ನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನಲ್ಲಿ ಮಳೆ ಆರ್ಭಟಕ್ಕೆ ಗೋಡೆ ಕುಸಿದು ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿತ್ತು. ಮಂಗಳೂರಿನಲ್ಲಿ ಭಾರೀ ಮಳೆಯಿಂದಾಗಿ ಮತ್ತೆ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಪಾಂಡೇಶ್ವರದ ರೋಸಾರಿಯೋ ಶಾಲೆ ಬಳಿ ಭಾರೀ ಮಳೆಯಿಂದಾಗಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಆಟೋ ಚಾಲಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ರಾಜು ಹಾಗೂ ದೇವರಾಜ್ ಎಂದು ಗುರುತಿಸಲಾಗಿದೆ. ಮಂಗಳೂರಿನ ಪಾಂಡೇಶ್ವರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಠನೆ ನಡೆದಿದೆ.