ಬೆಂಗಳೂರು : ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾ ವಲಸಿಗರನ್ನು ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಜಹಿದುಲ್ ಇಸ್ಲಾಂ (35) ಹಾಗೂ ಫಿರ್ದೋಸ್ ಎನ್ನುವ ಇಬ್ಬರು ಬಾಂಗ್ಲಾ ವಲಸಿಗರನ್ನು ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದಾರೆ.
ಈ ಇಬ್ಬರು 2 ವರ್ಷಗಳ ಹಿಂದೆ ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿದ್ದರು. ನಕಲಿ ಪಾಸ್ ಪೋರ್ಟ್, ಆಧಾರ್ ಕಾರ್ಡ್ ಸೇರಿದಂತೆ ಹಲವು ನಕಲಿ ದಾಖಲೆ ಪ್ರಮಾಣ ಪತ್ರಗಳನ್ನು ವಶಕ್ಕೆ ಪಡೆಯಲಾಗಿದೆ.








