ಯಾದಗಿರಿ : ವೇಗವಾಗಿ ಬಂದಂತಹ ಕಾರೊಂದು ಹಿಂದಿನಿಂದ ಬೈಕಿಗೆ ಗುದ್ದಿದ್ದ ಪರಿಣಾಮ ಬೈಕ್ ಮೇಲೆ ತೆರಳುತ್ತಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಪುರ್ ತಾಲೂಕಿನ ಮದ್ರಕಿ ಎಂಬಲ್ಲಿ ನಡೆದಿದೆ. ಅಪಘಾತದ ಬಳಿಕ ಕಾರನ್ನು ಅಲಿಯೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.
ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಸವಾರರ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮದ್ರಿಕಿ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. ಹಳ್ಳಪ್ಪ ದೊಡ್ಡನಂದಪ್ಪ, ಹಾಗೂ ಮಲ್ಲಯ್ಯ ಹನುಮಂತ್ ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ.ಅಪಘಾತದ ಬಳಿಕ ಕಾರು ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಭೀಮರಾಯನ ಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








