ಯಾದಗಿರಿ : ಯಾದಗಿರಿಯಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯ ಕೆಂಭಾವಿ ಪಟ್ಟಣದ ಸುರಪುರದ ಬಳಿ ನಡೆದಿದೆ.
ಹೌದು ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೇ ಕೆಂಭಾವಿ ಸಮೀಪ ಸುರಪುರ ಹುನಗುಂದ ಹೆದ್ದಾರಿಯಲ್ಲಿ ಈ ಒಂದು ಅಪಘಾತ ನಡೆದಿದೆ.
ವೀರಪ್ಪ ಮೊದನೂರು (30) ಶರಣಪ್ಪ ಪರಸನಹಳ್ಳಿ (28) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದ್ದು ಸ್ಥಳಕ್ಕೆ ಕೆಂಭಾವಿ ಪಟ್ಟಣದ PSI ಅಶೋಕ್ ಕಾಂಬಳೆ ಭೇಟಿ ನೀಡಿ ಪರಿಶೀಲನೇ ನಡೆಸುತ್ತಿದ್ದಾರೆ. ಘಟನೆ ಕುರಿತು ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.