ಮಂಡ್ಯ : ಮಂಡ್ಯದಲ್ಲಿ ಜಿಸಿಬಿ ಒಂದನ್ನು ಒವರ್ ಟೆಕ್ ಮಾಡುವ ಭರದಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಚಲಿಸುತ್ತಿದ್ದ ಬೈಕ್ ಸವಾರರು ಜೆಸಿಬಿ ಚಕ್ರದ ಅಡಿ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಅರಕೆರೆ ಗ್ರಾಮದಲ್ಲಿ ನಡೆದಿದೆ.ಈ ವೇಳೆ ಓರ್ವ ಸವಾರನ ಸ್ಥಿತಿ ಗಂಭೀರವಾಗಿದೆ.
ಹೌದು ಮಂಡ್ಯದಲ್ಲಿ ಚಲಿಸುತ್ತಿದ್ದ ಜೆಸಿಬಿ ಕೆಳಗೆ ಸವಾರರು ಬಿದ್ದಿದ್ದಾರೆ. ಶ್ರೀರಂಗಪಟ್ಟಣ ತಾಲೂಕಿನ ಅರಕೆರೆ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.ಬೈಕ್ ಸವಾರ ತಿಮ್ಮೇಗೌಡ ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಜೆಸಿಬಿ ಹಿಂದಿಕ್ಕುವ ಜಿದ್ದಾ ಜಿದ್ದಿಗೆ ಬಿದ್ದು ಭೀಕರವಾದ ಅಪಘಾತ ಸಂಭವಿಸಿದೆ. ಭೀಕರ ಅಪಘಾತ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ತಕ್ಷಣ ಸವಾರ ತಿಮ್ಮೇಗೌಡನನ್ನು ಸ್ಥಳೀಯರು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ.