ಬೆಂಗಳೂರು : ಇಂದು ಬೆಳಿಗ್ಗೆ ತಾನೇ ಬೆಂಗಳೂರಿನಲ್ಲಿ ರಸ್ತೆ ದಾಟುವ ವೇಳೆ ಮಹಿಳೆಗೆ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿತ್ತು. ಇದೀಗ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು ಎರಡು ಬಿಎಂಟಿಸಿ ಬಸ್ ಗಳ ನಡುವೆ ಸೆಲುಕಿ ಆಟೋ ಅಪ್ಪಚ್ಚಿಯಾಗಿದೆ ಈ ವೇಳೆ ಆಟೋ ಚಾಲಕ ಹಾಗೂ ಪ್ರಯಾಣಿಕ ಸ್ಥಳದಲ್ಲಿ ಸಾವನಪ್ಪಿರುವ ಘಟನೆ ಬೆಂಗಳೂರಿನ ಹನುಮಂತ ನಗರದ ಸೀತಾ ಸರ್ಕಲ್ ಬಳಿ ನಡೆದಿದೆ.
ಹೌದು ಬಿಎಂಟಿಸಿ ಬಸ್ ಡಿಕ್ಕಿಯಾಗಿ ಆಟೋ ಚಾಲಕ ಹಾಗು ಪ್ರಯಾಣಿಕ ಸಾವನ್ನಪ್ಪಿದ್ದಾನೆ. ಬೆಂಗಳೂರಿನ ಹನುಮಂತನಗರದ ಹನುಮಂತ ನಗರದ ಸೀತಾ ಸರ್ಕಲ್ ಬಳಿ ಭೀಕರ ಅಪಘಾತ ಸಂಭವಿಸಿದೆ. ಎರಡು ಬಿಎಂಟಿಸಿ ಬಸ್ಗಳ ನಡುವೆ ಸಿಲುಕಿ ಆಟೋ ಅಪ್ಪಚ್ಚಿಯಾಗಿದೆ. ಘಟನೆಯಲ್ಲಿ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಆಟೋ ಚಾಲಕ ಹಾಗೂ ಪ್ರಯಾಣಿಕ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.