ಬೆಂಗಳೂರು : ಯುವ ವಕೀಲೆ ಹಾಗೂ ಆಕೆಯ ಮನೆಯಲ್ಲಿದ್ದ ಇನ್ನೊಬ್ಬ ವ್ಯಕ್ತಿ ಸಹ ಶವವಾಗಿ ಪತ್ತೆಯಾಗಿರುವ ಘಟನೆ ಇದೀಗ ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಶ್ರೀನಿವಾಸಪುರದಲ್ಲಿ ನಡೆದಿದೆ.
ನೆಲಮಂಗಲ ತಾಲೂಕಿನ ಶ್ರೀನಿವಾಸಪುರದ ತೋಟದ ಮನೆಯಲ್ಲಿ ಯುವ ವಕೀಲೆ ರಮ್ಯಾ (27) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಹಾಗು ಆಕೆಯ ಮನೆಯಲ್ಲಿ ಇದ್ದಂತಹ ಪುನೀತ್ ಎನ್ನುವ ವ್ಯಕ್ತಿ ಕೂಡ ಶವವಾಗಿ ಪತ್ತೆಯಾಗಿದ್ದಾನೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಎಲ್ಲಾ ಆಯಾಮಗಳಲ್ಲೂ ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.