ಹರಪನಹಳ್ಳಿ : ವಿಜಯನಗರ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ತುಂಗಾಭದ್ರಾ ನದಿಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ ನಡೆದಿದೆ.

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ನಂದ್ಯಾಳ ಗ್ರಾಮದಲ್ಲಿ ತುಂಗಾಭದ್ರಾ ನದಿಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಕುಟುಂಬದವರ ಜೊತೆಗೆ ತುಂಗಾಭದ್ರಾ ನದಿಗೆ ಬಂದಿದ್ದ ತೌಸಿಫ್‌ (15) ಹಾಗೂ ಸಮೀರ್‌ (14) ನದಿ ನೀರಿನ ಸೆಳೆತಕ್ಕೆ ಸಿಕ್ಕು ನೀರುಪಾಲಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Share.
Exit mobile version