ಬೆಳಗಾವಿ : ಹೋಳಿ ಹಬ್ಬ ಆಚರಣೆ ಆರಂಭವಾದಾಗಿನಿಂದ ರಾಜ್ಯದಲ್ಲಿ ಅನೇಕ ಕಡೆಗಳಲ್ಲಿ ಹಲವರು ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದ್ದು, ಇದೀಗ ಬೆಳಗಾವಿಯಲ್ಲಿ ಕೂಡ ಹೋಳಿ ಹಬ್ಬ ಆಚರಣೆ ಬಳಿಕ ಇಬ್ಬರು ಬಾಲಕರು ಸ್ನಾನಕೆಂದು ಬಾವಿಗೆ ತೆರಳಿದ್ದಾರೆ. ಈ ವೇಳೆ ಬಾವಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಾಕ್ಸಂಬಾ ಗ್ರಾಮದಲ್ಲಿ ನಡೆದಿದೆ.
ಹೌದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಾಕ್ಸಂಬಾ ಗ್ರಾಮದಲ್ಲಿ ಹೋಳಿ ಆಚರಣೆ ಬಳಿಕ ಸ್ನಾನಕ್ಕೆಂದು ಬಾವಿಗೆ ಹೋಗಿದ್ದ ಇಬ್ಬರು ಬಾಲಕರು ನೀರುಪಾಲಾಗಿದ್ದಾರೆ.ಹೋಳಿ ಆಚರಿಸಿ ಬಾವಿಗೆ ಸ್ನಾನಕ್ಕೆ ಹೋಗಿದ್ದಾಗ ಇಬ್ಬರು ಬಾಲಕರು ಮುಳುಗಿ ಸಾವನ್ನಪ್ಪಿದ್ದಾರೆ.ಮೃತ ಬಾಲಕರನ್ನು ವೇದಾಂತ ಹಿರೇಕೋಡಿ (11) ಮನೋಜ್ ಕಲ್ಯಾಣಿ (9) ಎಂದು ತಿಳಿದುಬಂದಿದೆ. ಸ್ಥಳದಲ್ಲಿ ಇಬ್ಬರು ಮಕ್ಕಳ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸದಲಕ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತು ಪ್ರಕರಣ ದಾಖಲಾಗಿದೆ.