ಬಾಗಲಕೋಟೆ : ಬಾಗಲಕೋಟೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ದುಷ್ಕರ್ಮಿಗಳು ಶೆಡ್ ಗೆ ಬೆಂಕಿ ಇಟ್ಟ ಪರಿಣಾಮ ಶೆಡ್ ನಲ್ಲಿದ್ದ ಇಬ್ಬರು ಸಜೀವ ದಹನವಾಗಿರುವ ಘಟನೆ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಬೆಳಗಲಿ ಗ್ರಾಮದಲ್ಲಿ ದುಷ್ಕರ್ಮಿಗಳು ಶೆಡ್ ಗೆ ಬೆಂಕಿ ಇಟ್ಟಿದ್ದು, ಶೆಡ್ ನಲ್ಲಿದ್ದ ಜಬೀನಾ, ಶಬಾನಾ ಎಂಬುವರು ಸಜೀವ ದಹನವಾಗಿದ್ದಾರೆ. ದಸ್ತಗೀರ್ ಸಾಬಬ್, ಸುಬಾನ್ ಎಂಬುವರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳಕ್ಕೆ ಬಾಗಲಕೋಟೆ ಎಸ್ ಪಿ ಅಮರನಾಥ್ ರೆಡ್ಡಿ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಮಹಾಲಿಂಗಪುರ ಪೊಲೀಸ್ ಠಾಣೆಯಲಿ ಪ್ರಕರಣ ದಾಖಲಾಗಿದೆ.