ಬೆಂಗಳೂರು : ಕರ್ನಾಟಕದ ಇಬ್ಬರು ಮಕ್ಕಳಲ್ಲಿ HMPV ವೈರಸ್ ಸೋಂಕು ದೃಢಪಟ್ಟಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ ನೀಡಿದ್ದು, ಇದು ಅಪಾಯಕಾರಿ ವೈರಸ್ ಅಲ್ಲ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, HMPV ವೈರಸ್ ಸೋಂಕಿನ ತಡೆಗೆ ಮಹತ್ವದ ಕ್ರಮ ಕೈಗೊಳ್ಳಲಾಗುವುದು, ಸಚಿವ ದಿನೇಶ್ ಗುಂಡೂರಾವ್ ಅವರು ಸಭೆ ಕರೆದಿದ್ದಾರೆ. ಎಲ್ಲಾ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಬಗ್ಗೆ ಸೂಚನೆ ನೀಡಲಾಗಿದೆ. ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆಗೂ ಸೂಚನೆ ನೀಡಿದ್ದೇನೆ ಎಂದರು.
HMPV ವೈರಸ್ ಅಪಾಯಕಾರಿ ಅಲ್ಲ. ಆದರೂ ಮುಂಜಾಗ್ರತಾ ಕ್ರಮ ವಹಿಸುವ ಬಗ್ಗೆ ಸೂಚನೆ ನೀಡಲಾಗುವುದು ಎಂದು ಹೇಳಿದ್ದಾರೆ.