ಹಾಸನ : ಕೆರೆ ಮೀನು ತಿಂದು ಇಬ್ಬರು ಸಾವನ್ನಪ್ಪಿದ್ದು ಅಲ್ಲದೆ 15ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಬಸವನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಬಸವನಹಳ್ಳಿ ಗ್ರಾಮದಲ್ಲಿ ಕೆರೆ ಮೀನು ತಿಂದು ಇಬ್ಬರ ಸಾವನ್ನಾಪ್ಪಿದ್ದರೆ. ಗ್ರಾಮಕ್ಕೆ ಹಾಸನ ಜಿಲ್ಲಾಧಿಕಾರಿ ಸತ್ಯಭಾಮಾ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಬಸವನಹಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಕೆರೆ ಮೀನು ತಿಂದಿದ್ದ 15ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ ಎಂದು ಹೇಳಲಾಗುತ್ತಿದ್ದು, ಇದೆ ವೇಳೆ ಮೃತ ಕುಟುಂಬಕ್ಕೆ ಜಿಲ್ಲಾಧಿಕಾರಿ ಸತ್ಯಭಾಮ ಭೇಟಿ ಮಾಡಿ ಸಾಂತ್ವನ ಹೇಳಿದರು. ನಂತರ ಆಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥರ ಆರೋಗ್ಯ ಕೂಡ ವಿಚಾರಣೆ ನಡೆಸಿದರು.ಘಟನೆ ಬಗ್ಗೆ ಜಿಲ್ಲಾಧಿಕಾರಿಸತ್ಯಭಾಮಾ ಅವರು ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.