ಯಾದಗಿರಿ : ಯಾದಗಿರಿಯಲ್ಲಿ ಭೀಕರವಾದಂತಹ ಕೊಲೆಯಾಗಿದ್ದು ಹಾಡಹಗಲೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ನಡು ರಸ್ತೆಯಲ್ಲೇ ಇಬ್ಬರನ್ನು ಕೊಲೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ಸದ್ಯಾಪುರ ಎಂಬ ಗ್ರಾಮದ ಬಳಿ ನಡೆದಿದೆ.
ಇಂದು ಸಾದ್ಯಾಪುರ ಬಳಿ ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ.ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ಸಾದ್ಯಪುರ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. ಮದ್ದರಿಕಿ ಗ್ರಾಮದ ಮಾಪಣ್ಣ ಹಾಗೂ ಅಲಿಸಾಬ್ ಎನ್ನುವವರ ಕೊಲೆ ಆಗಿದೆ ಎಂದು ತಿಳಿದುಬಂದಿದೆ.
ಬೈಕ್ನಲ್ಲಿ ತೆರಳುವಾಗ ದುಷ್ಕರ್ಮಿಗಳು ಮಾರಕಾಸ್ತ್ರರಗಳಿಂದ ದಾಳಿ ಮಾಡಿದ್ದಾರೆ. ಓರ್ವ ವ್ಯಕ್ತಿ ರಸ್ತೆಯಲ್ಲಿ ನರಳಾಡಿ ಸಾವನಪ್ಪಿದ್ದರೆ, ಮತ್ತೊರ್ವ ವ್ಯಕ್ತಿ ಆಸ್ಪತ್ರೆ ದಾಖಲಿಸಿದಾಗ ಚಿಕಿತ್ಸೆ ಫಲೀಸದೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ಕುರಿತು ಶಹಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.