ಬೆಂಗಳೂರು : ನಿನ್ನೆ ಜಮ್ಮು ಕಾಶ್ಮೀರದಲ್ಲಿ ಪಹಾಲ್ಗಾಮ್ ನಲ್ಲಿ ನಡೆದಂತಹ ಉಗ್ರರ ಗುಂಡಿನ ದಾಳಿಯಲ್ಲಿ ಕರ್ನಾಟಕದ ಇಬ್ಬರು ಪ್ರವಾಸಿಗರು ಸಾವನಪ್ಪಿದ್ದಾರೆ. ಶಿವಮೊಗ್ಗದ ಮಂಜುನಾಥ್ ಹಾಗೂ ಬೆಂಗಳೂರಿನ ಭರತ್ ಭೂಷಣ್ ಅವರು ಉಗ್ರರ ಗುಂಡಿನ ದಾಳಿಗೆ ಬಲಿಯಾಗಿದ್ದರು. ಇದೀಗ ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರ 10 ಲಕ್ಷ ಪರಿಹಾರ ಘೋಷಣೆ ಮಾಡಿದೆ.
ಹೌದು ಮೃತರ ಕುಟುಂಬಗಳಿಗೆ ರಾಜ್ಯ ಸರ್ಕಾರ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಮಂಜುನಾಥ್ ಮತ್ತ್ತು ಭರತ್ ಭೂಷಣ ರನ್ನು ಉಗ್ರರು ಕಾಶ್ಮೀರದಲ್ಲಿ ಭೀಕರವಾಗಿ ಕೊಲೆ ಮಾಡಿದ್ದರು. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಗೆ ಪ್ರವಾಸಕ್ಕೆ ತೆರಳಿದ್ದಾಗ ಇಬ್ಬರನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ. ಹತ್ಯೆಯಾದ ಮಂಜುನಾಥ್ ಮತ್ತು ಭರತ್ ಭೂಷಣ ಕುಟುಂಬಸ್ಥರಿಗೆ ಇದೀಗ ರಾಜ್ಯ ಸರ್ಕಾರ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ.