ದೊಡ್ಡಬಳ್ಳಾಪುರ : ದೊಡ್ಡಬಳ್ಳಾಪುರದಲ್ಲಿ ಭೀಕರ ಅಪಘಾತವಾಗಿದ್ದು, ಕಾರೊಂದು ಓವರ್ ಟೇಕ್ ಮಾಡುವ ಭರದಲ್ಲಿ ಟ್ಯಾಂಕರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿದುರ್ಗಾ ಬಳಿ ಜರುಗಿದೆ.
ಅಪಘಾತದಲ್ಲಿ ಮೃತಪಟ್ಟವರನ್ನು ಬೆಂಗಳೂರು ಮೂಲದ ವಸಂತ್ (30) ಮತ್ತು ಚೇತನ್ (39) ಎಂದು ತಿಳಿದುಬಂದಿದೆ. ಗೌರಿಬಿದನೂರು ಕಡೆಯಿಂದ ದೊಡ್ಡಬಳ್ಳಾಪುರದತ್ತ ಕಾರು ಬರುತ್ತಿತ್ತು. ಈ ವೇಳೆ ಮುಂದೆ ಹೋಗ್ತಿದ್ದ ವಾಹನ, ಒವರ್ ಟೇಕ್ ಮಾಡುವ ಭರದಲ್ಲಿ ಎದುರಿಗೆ ಬರ್ತಿದ್ದ ಟ್ಯಾಂಕರ್ ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಟ್ಯಾಂಕರ್ ಮತ್ತು ಕಾರಿನ ಮುಂಬಾಗ ಜಖಂ ಆಗಿದೆ. ಗಾಯಾಳುಗಳಿಗೆ ದೊಡ್ಡಬಳ್ಳಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತದೇಹಗಳನ್ನು ದೊಡ್ಡಬಳ್ಳಾಪುರ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ಯಲ್ಲಿ ಅಪಘಾತದ ಕುರಿತು ಪ್ರಕರಣ ದಾಖಲಾಗಿದೆ.