ಚಿತ್ರದುರ್ಗ : ರಾಜ್ಯದಲ್ಲಿ ಇಂದು ಬೆಳ್ಳಂ ಬೆಳಿಗ್ಗೆ ಭೀಕರವಾದ ಅಪಘಾತ ಸಂಭವಿಸಿದ್ದು, ಚಲಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದು, ಘಟನೆಯಲ್ಲಿ ಇನ್ನಿಬ್ಬರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ, ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬೊಮ್ಮಕ್ಕನಹಳ್ಳಿಯಲ್ಲಿ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬೊಮ್ಮಕ್ಕನಹಳ್ಳಿಯಲ್ಲಿ ಈ ಒಂದು ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಇದ್ದಂತಹ ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದರೆ, ಇನ್ನುಳಿದ ಇಬ್ಬರಿಗೆ ಗಂಭೀರವಾದ ಗಾಯಗಳಾಗಿವೆ. ಗಾಯಳುಗಳಿಗೆ ಮೊಳಕಾಲ್ಮೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರು ಮೃತರ ಗುರುತು ಪತ್ತೆ ಹಚ್ಚುತ್ತಿದ್ದಾರೆ. ಅಪಘಾತದ ಕುರಿತು ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.