ಬೆಳಗಾವಿ : ಬೆಳಗಾವಿಯಲ್ಲಿ ಇಂದು ಭೀಕರವಾದಂತಹ ಅಪಘಾತ ಸಂಭವಿಸಿದ್ದು ಸಕ್ಕರೆ ಸಾಗಿಸುತ್ತಿದ್ದ ಲಾರಿ ಒಂದು ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಲಾರಿ ಪಲ್ಟಿಯಾದ ಪರಿಣಾಮ ಲಾರಿಯಲ್ಲಿದ್ದ ಇಬ್ಬರು ಸ್ಥಳದಲ್ಲಿ ಸಾವನಪ್ಪಿದ್ದರೆ ಇಬ್ಬರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಲಗುತ್ತಿ ಎಂಬಲ್ಲಿ ನಡೆದಿದೆ.
ಹೌದು ಸಕ್ಕರೆ ಸಾಗಿಸುತ್ತಿದ್ದ ಲಾರಿ ಪಾಲ್ಟಿಯಾಗಿ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಲಗತ್ತಿ ಬಳಿ ಈ ಒಂದು ಘಟನೆ ನಡೆದಿದೆ. ಮೃತರು ಬಾಲಪ್ಪ ಮುದಕವಿ (28) ಮತ್ತು ಯಲ್ಲವ್ವ ಚೆನ್ನವವರ್ (35) ಎಂದು ತಿಳಿದುಬಂದಿದೆ. ಇನ್ನು ಲಾರಿ ಚಾಲಕ ಸೇರಿ ಇಬ್ಬರಿಗೆ ಗಂಭೀರವಾದ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಮದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.