ಚಿತ್ರದುರ್ಗ : ಚಿತ್ರದುರ್ಗದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಪಟ್ಟರೆಹಳ್ಳಿ ಗ್ರಾಮದ ಬಳಿ ಹಿಟ್ ಅಂಡ್ ರನ್ ಗೆ ಇಬ್ಬರು ಬಲಿಯಾಗಿದ್ದಾರೆ, ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಪಟ್ಟರೆಹಳ್ಳಿ ಗ್ರಾಮದಲ್ಲಿ ಈ ಒಂದು ಅಪಘಾತ ಸಂಭವಿಸಿದೆ.
ರಸ್ತೆಬದಿ ನಿಂತಿದ್ದವರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಘಟನೆಯಲ್ಲಿ ಮತ್ತೆ ಇಬ್ಬರಿಗೆ ಗಂಭೀರವಾದ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರು ಕಟ್ಟಿದ್ದರಿಂದ ರಸ್ತೆ ಬದಿ ನಾಲ್ವರು ರಿಪೇರಿಗಾಗಿ ನಿಂತಿದ್ದರು. ಈ ವೇಳೆ ಅಪಚಿತವಾ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನಪ್ಪಿದ್ದರೆ, ಇಬ್ಬರಿಗೆ ಗಾಯಗಳಾಗಿವೆ. ಅಪಘಾತದ ಬಳಿಕ ವಾಹನ ಸಮೇತ ಚಾಲಕ ಪರಾರಿಯಾಗಿದ್ದಾನೆ. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








