ಚಾಮರಾಜನಗರ : ಚಾಮರಾಜನಗರದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಕಾರು ಮತ್ತು ಟಿಟಿ ವಾಹನದ ಮಧ್ಯ ಭೀಕರವಾದ ಅಪಘಾತ ಸಂಭವಿಸಿ ಕಾರಿನಲ್ಲಿ ಚಲಿಸುತ್ತಿದ್ದ ಕೇರಳ ಮೂಲದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೆಂಡಗಳ್ಳಿ ಗೇಟ್ ಬಳಿ ನಡೆದಿದೆ.
ಗುಂಡ್ಲುಪೇಟೆ ತಾಲೂಕಿನ ಬೆಂಡಗಳ್ಳಿ ಗೇಟ್ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಕೇರಳ ಮೂಲದ ಇಬ್ಬರು ಸ್ಥಳದಲ್ಲಿ ಸಾವನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತರ ಕುರಿತು ಪೊಲೀಸರು ಇದೀಗ ಮತ್ತಷ್ಟು ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ.