ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ಹಿಟ್ & ರನ್ ಗೆ ಇಬ್ಬರು ಬಲಿಯಾಗಿದ್ದು, ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಪಾದಚಾರಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮಣಿಗೆರೆ ಗ್ರಾಮದಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರ ಮೇಲೆ ಕಾರು ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಣಿಗೆರೆ ಗ್ರಾಮದ ಮರಿಸ್ವಾಮಿ (52) ಹಾಗೂ ತಿಬ್ಬಯ್ಯ (60) ಮೃತಪಟ್ಟ ದುರ್ದೈವಿಗಳು.
ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಬಳಿಕ ಕಾರು ಚಾಲಕ ಪರಾರಿಯಾಗಿದ್ದು, ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.