ಕೋಲಾರ : ಕೋಲಾರದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಲಾರಿ ಹಾಗೂ ಟಿಪ್ಪರ್ ಮುಖಾಮುಖಿ ಡಿಕ್ಕಿ ಆದ ಪರಿಣಾಮ ಲಾರಿಯಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಗೊರವನಹಳ್ಳಿ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ.
ಲಾರಿ ಚಾಲಕ ಹನುಮಂತ (55) ಕಾರ್ಮಿಕ ನಾಗರಾಜ್ ಸಾವನ್ನಪ್ಪಿದ್ದಾರೆ. ಟಿಪ್ಪರ್ ನಲ್ಲಿದ್ದ ಇಬ್ಬರಿಗೆ ಗಂಭೀರವಾದ ಗಾಯಗಳಾಗಿದ್ದು ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ಹನುಮಂತ ಬಂಗಾರಪೇಟೆ ತಾಲೂಕಿನ ಕಣಿಂಬೆಲೆ ನಿವಾಸಿ ಎಂದು ತಿಳಿದುಬಂದಿದೆ. ಅಪಘಾತದ ಕುರಿತು ಬೂದಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.