ಮೈಸೂರು : ಮೈಸೂರು ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಎರಡು ಬೈಕ್ ಗಳ ನಡುವೆ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಹೆಳವರಮಂಡಿ ಬಳಿ ಅಪಘಾತ ಸಂಭವಿಸಿದ್ದು, ಆದಿಬೆಟ್ಟಳ್ಳಿ ಗ್ರಾಮದ ನಿವಾಸಿ ನಾಗರಾಜ್ (೩೫) ಹಾಗೂ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ನಿವಾಸಿ ಬಿಳಿಗಿರಿ (೩೦) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಟಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.