ದೊಡ್ಡಬಳ್ಳಾಪುರ : ದೊಡ್ಡಬಳ್ಳಾಪುರದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ತ್ರಿಬಲ್ ರೈಡ್ ಮಾಡುತ್ತಿದ್ದ ಬೈಕ್ ಅಪಘಾತಗೊಂಡು ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುಂಡಮಗೆರೆ ಕ್ರಾಸ್ ಸಮೀಪದ ನೆಲ್ಲುಕುಂಟೆ ಸರ್ಕಲ್ ಬಳಿ ತಡರಾತ್ರಿ ನಡೆದಿದೆ.
ಮೃತರನ್ನು ಗುಂಡಮಗೆರೆ ಗ್ರಾಮದ ವೆಂಕಟೇಶ್ (45), ಶಿವಪುರ ಗ್ರಾಮದ ರಕ್ಷಿತ್ (25) ಮೃತ ದುರ್ದೈವಿಗಳು. ಮುತ್ತೂರು ಗ್ರಾಮದ ವೆಂಕಟೇಶ್ (45)ಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಧ್ಯರಾತ್ರಿ ಒಂದೇ ಬೈಕಿನಲ್ಲಿ ಮೂವರು ಗುಂಡಮಗೆರೆ ಕ್ರಾಸ್ನಿಂದ ನೆಲ್ಲುಕುಂಟೆ ಕಡೆ ಹೋಗುವಾಗ ಆಯತಪ್ಪಿ ಮರಕ್ಕೆ ಬೈಕ್ ಡಿಕ್ಕಿ ಹೊಡೆದಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.