ಹಾಸನ : ಧರ್ಮಸ್ಥಳಕ್ಕೆ ಹೋಗುತ್ತಿದ್ದ ಪಾದಚಾರಿಗಳ ಮೇಲೆ ಖಾಸಗಿ ಬಸ್ ಒಂದು ಹರಿದ ಪರಿಣಾಮ ಸ್ಥಳದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಹಾಸನ ತಾಲೂಕಿನ ಕೆಂಚಟ್ಟಹಳ್ಳಿ ಬಳಿ ಈ ಒಂದು ಅಪಘಾತ ಸಂಭವಿಸಿದೆ.
ಮೃತರನ್ನು ಗ್ರಾಮದ ಸುರೇಶ್ (60) ಮತ್ತು ಕುಮಾರ್ (55) ಮೃತ ದುರ್ದೈವಿಗಳಾಗಿದ್ದಾರೆ. ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಆನಗೋಳ ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದೆ. ಇನ್ನೂ ಗಂಭೀರವಾಗಿ ಗಾಯಗೊಂಡ ದಿನೇಶ್ ಗೆ ಹಾಸನ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇವರು ಪಾದಯಾತ್ರೆಯ ಮೂಲಕ ಧರ್ಮಸ್ಥಳಕ್ಕೆ ಹೋಗುತ್ತಿದ್ದಾಗ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಶಾಂತಿಗ್ರಾಮ ಪೊಲೀಸ್ ಠಾಣೆಯಲ್ಲಿ ಅಪಘಾತದ ಕುರಿತು ಪ್ರಕರಣ ದಾಖಲಾಗಿದೆ.