ಚಿತ್ರದುರ್ಗ : ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿ ಸಾವನಪ್ಪಿದ್ದು ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವಂತಹ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕುರುಡಿಹಳ್ಳಿ ಎಂಬ ಗ್ರಾಮದಲ್ಲಿ ನಡೆದಿದೆ.
ಮರಕ್ಕೆ ಕಾರುಡಿಕ್ಕಿಯಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕುರುಡಿಹಳ್ಳಿ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದು, ಮತ್ತೊಬ್ಬರಿಗೆ ಗಂಭೀರವಾದಂತಹ ಗಾಯಗಳಾಗಿವೆ.ಕಾರಿನಲ್ಲಿ ಇದ್ದ ವೆಂಕಟೇಶ್ (50) ಇನ್ನೊಬ್ಬ ವ್ಯಕ್ತಿಯಾದ ವೆಂಕಟೇಶ್ (48) ಸಾವನಪ್ಪಿದ್ದಾರೆ.
ಮೃತರು ಚಳ್ಳಕೆರೆ ತಾಲೂಕಿನ ಜನೆನಹಳ್ಳಿ ನಿವಾಸಿಗಳು ಎಂದು ತಿಳಿದು ಬಂದಿದೆ. ಕಾರಿನಲ್ಲಿದ್ದ ಇನ್ನೊರ್ವ ವ್ಯಕ್ತಿಯಾದ ಗಾಯಾಳು ಕಿಶೋರ್ನನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು ಪ್ರಕರಣ ದಾಖಲಾಗಿದೆ.