ಬೆಂಗಳೂರು : ಮನೆಯಲ್ಲಿ ಅಡುಗೆ ಅನೀಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದ್ದು, ಈ ವೇಳೆ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸಾವನ್ನಪ್ಪಿದ್ದರೆ, ಮೂವರಿಗೆ ಗಂಭೀರವಾದ ಗಾಯಗಳಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ.
ನೆಲಮಂಗಲ ಬಳಿಯ ಅಡಕಮಾರನಹಳ್ಳಿ ಓವರ್ ಟ್ಯಾಂಕ್ ಬಳಿ ಈ ಘಟನೆ ಸಂಭವಿಸಿದೆ. ನಾಗರಾಜ್ (50), ಶ್ರೀನಿವಾಸ್ (50) ಮೃತ ದುರ್ದೈವಿಗಳಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಂಗಯ್ಯ ಎಂಬವರಿಗೆ ಸೇರಿದ ಎರಡು ಬಾಡಿಗೆ ಮನೆಗಳಲ್ಲಿ ನಾಗರಾಜ್ ಅವರು ಒಂದು ಮನೆಯನ್ನ ನಾಗರಾಜ್ ಬಾಡಿಗೆಗೆ ಪಡೆದಿದ್ದರು.
ಮೃತ ನಾಗರಾಜ್ ಪತ್ನಿ ಲಕ್ಷ್ಮೀದೇವಿ, ಮಕ್ಕಳಾದ ಬಸನಗೌಡ ಹಾಗು ಅಭಿಷೇಕ್ ಗೌಡ ಗಾಯಗೊಂಡಿದ್ದಾರೆ. ಬೆಳಗ್ಗೆ ಕೆಲಸಕ್ಕೆಂದು ತೆರಳುತ್ತಿದ್ದ ನಾಗರಾಜ್ ದೇವರಿಗೆ ದೀಪ ಹಚ್ಚಿದ್ದರು. ಖಾಲಿಯಾಗಿದ್ದ ಸಿಲಿಂಡರ್ ಬದಲಾಯಿಸಲು ಎರಡನೇ ಮಗ ಅಭಿಷೇಕ್ ಮುಂದಾಗಿದ್ದರು. ಈ ವೇಳೆ ಸಿಲಿಂಡರ್‌ನಿಂದ ಗ್ಯಾಸ್ ಲೀಕ್ ಆಗಿದ್ದು, ದೀಪದ ಬೆಂಕಿ ತಗುಲಿ ದುರಂತ ಸಂಭವಿಸಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.