ಉತ್ತರಕನ್ನಡ : ಆಟಿಕೆ ತುಂಬಿದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ಉಳಿದ ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸುಳಿಮೂರ್ಕಿ ಬಳಿ ಒಂದು ಘಟನೆ ನಡೆದಿದೆ.
ಆಟಿಕೆ ತುಂಬಿದ ಲಾರಿಯೊಂದು ಸಾಗರದಿಂದ ಹೊನ್ನಾವರ ಕಡೆ ಬರುತ್ತಿತ್ತು. ಇವಳೇ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರಿಗೆ ಗಾಯಗಳಾಗಿವೆ. ಗಾಯಾಳುಗಳಿಗೆ ಹೊನ್ನಾವರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಈ ಒಂದು ಪ್ರಕರಣ ದಾಖಲಾಗಿದೆ.