ಹಾವೇರಿ : ರೋಡ್ ರೋಲರ್ ಹರಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಈ ಒಂದು ಘಟನೆ ನಡೆದಿದೆ.
ಹೌದು ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರೋಡ್ ರೋಲರ್ ಹರಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಇದೀಗ ಒಂದು ಘಟನೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಗುತ್ತಿಗೆದಾರರು ಆಗಮಿಸಬೇಕು ಎಂದು ಉಳಿದ ಕಾರ್ಮಿಕರು, ಮೃತರ ಕುಟುಂಬಸ್ಥರು ಪಟ್ಟು ಹಿಡಿದಿದ್ದಾರೆ.
ಸ್ಥಳಕ್ಕೆ ಗುತ್ತಿಗೆದಾರ ಬರುವವರೆಗೂ ಮೃತ ದೇಹಗಳನ್ನು ಸ್ಥಳಾಂತರಿಸದಿರಲು ನಿರ್ಧಾರ ಕೈಗೊಂಡಿದ್ದಾರೆ. ಸ್ಥಳದಲ್ಲಿಯೇ ಮೃತ ಕುಟುಂಬಸ್ಥರಿಗೆ ಪರಿಹಾರ ಘೋಷಣೆ ಮಾಡಲು ಒತ್ತಾಯಿಸುತ್ತಿದ್ದಾರೆ. ಬಿಗುವಿನ ವಾತಾವರಣ ಹಿನ್ನೆಲೆಯಲ್ಲಿ ಘಟನಾ ಸ್ಥಳಕ್ಕೆ ಎಸ್ಪಿ ಭೇಟಿ ನೀಡಿದ್ದಾರೆ.ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.