ಹಾಸನ: ರಾಜ್ಯದಲ್ಲಿ ಮಹಾಮಳೆಗೆ ಮತ್ತಿಬ್ಬರು ಬಲಿಯಾಗಿದ್ದಾರೆ. ಭಾರೀ ಮಳೆಯಿಂದಾಗಿ ಚಾಲಕನಿಗೆ ರಸ್ತೆ ಕಾಣದೇ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಹಾಸನ ತಾಲೂಕಿನ ಬಾಗೇ ಸಮೀಪ ಅರಸು ನಗರದಲ್ಲಿ ಮಳೆಯ ಕಾರಣ ಚಾಲಕನಿಗೆ ರಸ್ತೆ ಕಾಣದೆ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು ಇಬ್ಬರು ಮೃತಪಟ್ಟಿದ್ದಾರೆ. ಮತ್ತಿಬ್ಬರು ಗಾಯಗೊಂಡಿದ್ದಾರೆ. ಬೆಂಗಳೂರಿನ ದಾಸರಹಳ್ಳಿ ಮೂಲದ ಶರತ್(28), ಅಭಿಷೇಕ್(27) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಬೆಂಗಳೂರು ಮೂಲದ ಟ್ರಾವೆಲ್ಸ್ ವೊಂದರ ಮೂಲಕ ಬಾಡಿಗೆ ಕಾರ್ ನಲ್ಲಿ ಧರ್ಮಸ್ಥಳಕ್ಕೆ ತೆರಳುತ್ತಿದ್ದ ವೇಳೆ ಭಾರಿ ಮಳೆಯ ಕಾರಣ ಚಾಲಕನಿಗೆ ರಸ್ತೆ ಕಾಣದೆ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.